ಮನುಷ್ಯನಿಗೆ ನಿದ್ರೆ ಬಹುಮುಖ್ಯವಾಗಿದ್ದು, ಪ್ರತಿನಿತ್ಯ 7 ರಿಂದ 9 ತಾಸು ಉತ್ತಮ ನಿದ್ದೆ ಬೇಕಾಗುತ್ತದೆ.
ನಿದ್ರೆ ಸರಿಯಾಗಿ ಆದರೆ ಮಾತ್ರ ಕೆಲಸವನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತಗೆ ನಮ್ಮ ಭಾವನೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ.
ಮಾನಸಿಕವಾಗಿ ದಣಿಯುತ್ತೀರಿ ಜೊತೆಗೆ ಮುಂಗೋಪ, ಇಡೀ ದಿನ ಕಿರಿಕಿರಿಯಂತಹ ಸಮಸ್ಯೆಗಳು ಎದುರಾಗುತ್ತದೆ. ಜೊತೆಗೆ ಆಲಸ್ಯರಾಗುತ್ತೀರಿ. ಇದು ಮಾನಸಿಕ ತೊಂದರೆಯಾಗಿದ್ದರೆ, ದೈಹಿಕವಾಗಿ ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತೀರಿ.
ನರಮಂಡಲ
ಕೇಂದ್ರ ನರಮಂಡಲವು ದೇಹದ ಪ್ರಾಥಮಿಕ ಮಾಹಿತಿಯ ಹೆದ್ದಾರಿಯಾಗಿದೆ. ಇದು ಸರಿಯಾಗಿ ಕೆಲಸ ಮಾಡಲು ನಿದ್ದೆ ಅವಶ್ಯವಿರುತ್ತದೆ. ಆದರೆ ತೀವ್ರವಾದ ನಿದ್ರಾಹೀನತೆಯಿಂದಾಗಿ ನರಮಂಡಲದಲ್ಲಿ ಪ್ರಮುಖ ತೊಂದರೆ ಆಗುತ್ತದೆ.
ರೋಗ ನಿರೋಧಕ ಶಕ್ತಿ
ನಿದ್ರಾಹೀನತೆಯಿಂದ ನಿಮ್ಮ ದೇಹವು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವುದನ್ನು ನಿಲ್ಲಿಸುತ್ತದೆ.
ನೀವು ಪ್ರತಿನಿತ್ಯ ಸಾಕಷ್ಟು ನಿದ್ದೆಯನ್ನು ಪಡೆಯದಿದ್ದರೆ, ನಿಮ್ಮ ದೇಹವು ಸೋಂಕು ಹಾಗೂ ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ರೋಗದಿಂದ ಚೇತರಿಸಿಕೊಳ್ಳಲು ಅಧಿಕ ಸಮಯ ಬೇಕಾಗುತ್ತದೆ.
ಉಸಿರಾಟ
ರಾತ್ರಿ ನೀವು ಸರಿಯಾಗಿ ನಿದ್ದೆ ಮಾಡದಿದ್ದರೆ ಶೀತ ಹಾಗೂ ಜ್ವರದ ಸಮಸ್ಯೆಯಿಂದ ಬಳಲುವ ಪರಿಸ್ಥಿತಿ ಬರಬಹುದು. ಇದರಿಂದಾಗಿ ಅಸ್ತಮಾದಂತಹ ಉಸಿರಾಟದ ಸಮಸ್ಯೆಗಳು ಎದುರಾಗಬಹುದು.
ಜಿರ್ಣಾಂಗ
ನಿದ್ದೆ ಕಡಿಮೆ ಮಾಡುವುದರಿಂದ ಕೆಲವೊಮ್ಮೆ ನೀವು ವ್ಯಾಯಾಮ ಮಾಡುವಾಗ ಆಯಾಸವಾಗುತ್ತದೆ. ಇದರಿಂದಾಗಿ ತೂಕವು ಹೆಚ್ಚಾಗುತ್ತದೆ ಜೊತೆಗೆ ಜಿರ್ಣಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀಳುತ್ತದೆ.
ಹೃದ್ರೋಗ
ಸಾಕಷ್ಟು ನಿದ್ದೆ ಮಾಡದಿದ್ದರೆ ಜನರು ಹೃದಯ ರಕ್ತನಾಳದ ಕಾಯಿಲೆಗೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ.
ಒಂದು ಅಧ್ಯಯನದ ಪ್ರಕಾರ ನಿದ್ರಾಹೀನತೆಯಿಂದಾಗಿ ಹೃದಯಾಘಾತ ಮತ್ತು ಸ್ಟ್ರೋಕ್ನಂತಹ ಕಾಯಿಲೆಗಳು ಎದುರಾಗುವ ಸಂಭವವಿರುತ್ತದೆ.