ರಾತ್ರಿ ಮಲಗುವಾಗ ಹೀಗೆ ಮಾಡಿದರೆ ಹೃದಯಾಘಾತ ಸಂಭವಿಸುವುದಿಲ್ಲ

ಸೋಮವಾರ, 20 ಮೇ 2019 (06:53 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹೆಚ್ಚಾಗಿ ಈ ಹೃದಯಾಘಾತವು ರಾತ್ರಿಯ ವೇಳೆಯಲ್ಲಿ ಸಂಭವಿಸುತ್ತದೆ. ಆದರೆ ಸಂಶೋಧನೆಯೊಂದರ ಪ್ರಕಾರ ರಾತ್ರಿ ಮಲಗುವಾಗ ಹೀಗೆ ಮಾಡಿದರೆ ಹೃದಯದ ಆರೋಗ್ಯ ಉತ್ತಮವಾಗುವುದಲ್ಲದೇ ಹೃದಯಾಘಾತ ಸಂಭವಿಸುವುದಿಲ್ಲ.




ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ವೈದ್ಯರು ಹೇಳಿದ್ದಾರೆ.


ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು. 149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು. ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ