ಮೊಳಕೆ ಕಾಳಿನಲ್ಲಿದೆ ಆರೋಗ್ಯದ ಗುಟ್ಟು

ಭಾನುವಾರ, 14 ಮೇ 2017 (09:49 IST)
ಬೆಂಗಳೂರು: ಮೊಳಕೆ ಕಾಳು ತಿಂದರೆ ಆರೋಗ್ಯಕ್ಕೆ ಉತ್ತಮ ಎಂದು ನಮಗೆ ಗೊತ್ತು. ಆದರೆ ಮೊಳಕೆ ಕಾಳು ಯಾವೆಲ್ಲಾ ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಉತ್ತಮ ಎನ್ನುವುದನ್ನು ನೋಡೋಣ.

 
ಜೀರ್ಣಕ್ರಿಯೆಗೆ
ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

ರಕ್ತ ಪರಿಚಲನೆಗೆ
ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

ತೂಕ ಇಳಿಕೆಗೆ
ತೂಕ ಇಳಿಸಲು ಡಯಟ್ ಮಾಡುವವರಮ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

ರೋಗ ನಿರೋಧಕ ಶಕ್ತಿ
ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿಯಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ