ಸಪೋಟ ಹಣ್ಣಿನಲ್ಲಿರುವ ವಿಶಾಲ ಶ್ರೇಣಿಯ ಪೋಷಕಾಂಶಗಳು ಆರೋಗ್ಯಕ್ಕೆ ಬಹಳ ಶ್ರೇಷ್ಠವಾಗಿರುವುದಲ್ಲದೆ ತಿನ್ನಲು ಅತ್ಯಂತ ರುಚಿಯಾಗಿಯೂ ಇರುತ್ತದೆ. ಉತ್ಕರ್ಷಣ ನಿರೋಧಿ ಅಂಶಗಳಿಂದ ಶ್ರೀಮಂತವಾಗಿರುವ ಸಪೋಟ ವಿಟಮಿನ್ ಇ, ಎ, ಸಿ ಮತ್ತು ಕಬ್ಬಿಣ ಮತ್ತು ತಾಮ್ರದ ಗುಣಗಳನ್ನು ಹೊಂದಿದೆ.
* ವಿಟಮಿನ್ ಎ ಅಂಶವನ್ನು ಹೊಂದಿರುವ ಚಿಕ್ಕುವಿನಿಂದ ಕಣ್ಣಿನ ದೃಷ್ಟಿ ಸುಧಾರಣೆಯಾಗುತ್ತದೆ.
* ಸಪೋಟದಲ್ಲಿ ವಿಟಮಿನ್ ‘ಎ’ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ.
* ಈ ಹಣ್ಣಿನಲ್ಲಿ ವಿಟಮಿನ್ ಬಿ-ಕಾಂಪ್ಲೆಕ್ಸ್ ಹೇರಳವಾಗಿರುವ ಕಾರಣ ಈ ಗುಂಪಿನ ವಿಟಮಿನ್ನುಗಳಿಂದ ದೊರಕುವ ಎಲ್ಲಾ ಪ್ರಯೋಜನಗಳು ದೊರಕುತ್ತವೆ.
* ಸಪೋಟ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿ ಇರುವುದರಿಂದ ಮಲಬದ್ಧತೆಗೆ ಸಂಭಂದಪಟ್ಟ ಕೊರತೆಗಳನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ.
* ತಾಜಾ ಸಪೋಟವನ್ನು ಹಾಗೆಯೇ ತಿಂದರೆ ಜೀರ್ಣಕ್ರಿಯೆಗೆ ಬೇಕಾದ ನಾರಿನಂಶವನ್ನು ದೇಹ ಪಡೆಯಲು ಸಾಧ್ಯವಾಗುತ್ತದೆ.
* ಸಪೋಟದಲ್ಲಿರುವ ಕಾರ್ಬೋಹೈಡ್ರೇಟ್ಸ್ ಮತ್ತು ಪೋಷಕಾಂಶಗಳು ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದರಿಂದ ವಾಕರಿಕೆ, ತಲೆ ತಿರುಗುವುದು, ಸುಸ್ತು ಕಡಿಮೆಯಾಗುತ್ತದೆ.
* ಇದರ ಬೀಜಗಳನ್ನು ಅರೆದು ಪೇಸ್ಟ್ ಮಾಡಿ ಹರಳೆಣ್ಣೆಯ ಜೊತೆ ಮಿಶ್ರಣ ಮಾಡಿಕೊಂಡು ನೆತ್ತಿಯಮೇಲೆ ಹಚ್ಚಿ. ಒಂದು ರಾತ್ರಿಕಳೆದು ಮಾರನೇ ದಿನ ಚೆನ್ನಾಗಿ ತೊಳೆಯಿರಿ. ಇದರಿಂದ ನಿಮ್ಮ ಕೂದಲು ಮೃದುವಾಗುವುದಲ್ಲದೆ ತಲೆಹೊಟ್ಟಿನ ಸಮಸ್ಯೆಯನ್ನು ನಿಯಂತ್ರಿಸಬಹುದು
* ಸಪೋಟದಲ್ಲಿ ಹೇರಳವಾಗಿರುವ ಪೊಟಾಶಿಯಂ ಅಂಶವು ದೇಹದ ಮಾಂಸಖಂಡಗಳ ಬಲವರ್ಧನೆಗೆ ನೆರವಾಗುತ್ತದೆ.
* ಸಪೋಟದಲ್ಲಿರುವ ಅತಿ ಹೆಚ್ಚಿನ ಟ್ಯಾನಿನ್ ಅಂಶವು ಪ್ರಮುಖ ಉರಿಯೂತ ವಿರೋಧಿ ಗುಣಗಳನ್ನು ಹೊಂದಿರುತ್ತದೆ.
* ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಗಂಧಕ, ಕಬ್ಬಿಣ ಹಾಗೂ ಇತರ ಖನಿಜಗಳು ಮೂಳೆಗಳನ್ನು ಆರೋಗ್ಯಕರವಾಗಿ ಹಾಗೂ ದೃಢಯುತವಾಗಿರಿಸಲು ನೆರವಾಗುತ್ತವೆ
* ಸಪೋಟ ರಕ್ತ ಶುದ್ಧಿ ಮಾಡುತ್ತದೆ ಹಾಗೂ ದೇಹದಲ್ಲಿ ರಕ್ತ ಉತ್ಪಾದಿಸಲು ಸಹಾಯ ಮಾಡುತ್ತದೆ.
* ಇದರಲ್ಲಿರುವ ಪ್ರಬಲ ನಿದ್ರಾಜನಕ (ಸೆಡೇಟಿವ್) ಉದ್ರೇಕಗೊಂಡಿರುವ ನರಗಳನ್ನು ಶಾಂತಗೊಳಿಸಿ ಒತ್ತಡವನ್ನು ಕಡಿಮೆಮಾಡುತ್ತದೆ. ಆದ್ದರಿಂದ ನಿದ್ರಾಹೀನತೆ, ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಇದು ಬಹಳ ಒಳ್ಳೆಯದು.