ದಡಾರ ಮತ್ತು ರುಬೆಲ್ಲಾ ರೋಗ ತಡೆಗಟ್ಟಲು ತಪ್ಪದೇ ನಿಮ್ಮ ಮಕ್ಕಳಿಗೆ ಲಸಿಕೆ ಹಾಕಿ!

ಸೋಮವಾರ, 6 ಫೆಬ್ರವರಿ 2017 (10:13 IST)
ಬೆಂಗಳೂರು: ರಾಜ್ಯಾದ್ಯಂತ ದಡಾರ ಮತ್ತು ರುಬೆಲ್ಲಾ ರೋಗಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಿದೆ. ನಾಳೆಯಿಂದ ಫೆಬ್ರವರಿ 28 ರವರೆಗೆ ಉಚಿತವಾಗಿ ನಿಮ್ಮ ಮಕ್ಕಳಿಗೆ ಲಸಿಕೆ ಹಾಕಿಕೊಳ್ಳಬಹುದು.

 
ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ,  ಸರ್ಕಾರಿ/ಖಾಸಗಿ ಶಾಲೆಗಳಲ್ಲಿ ಲಸಿಕೆ ಕೌಂಟರ್ ತೆರೆಯಲಾಗಿದೆ. 9 ತಿಂಗಳಿನ ಮಗುವಿನಿಂದ 15 ವರ್ಷದೊಳಗಿನ ಮಕ್ಕಳು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಲಸಿಕೆಯ ಸುರಕ್ಷತೆ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾಗಿಲ್ಲ. ಇದು ವಿಶ್ವ ಆರೋಗ್ಯ ಸಂಸ್ಥೆ ಅನುಮೋದಿತ ಲಸಿಕೆ ಕಾರ್ಯಕ್ರಮವಾಗಿದೆ. ಕುಟುಂಬ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಬಂಧ ಪಟ್ಟ ಎಲ್ಲಾ ಮಕ್ಕಳು ಇದರ ಪ್ರಯೋಜನ ಪಡೆದು ಮಾರಣಾಂತಿಕ ದಡಾರ ಮತ್ತು ರುಬೆಲ್ಲಾ ರೋಗದಿಂದ ಮುಕ್ತರಾಗಲು ಇಲಾಖೆ ಕರೆ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ