ಹಸಿ ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತದೆ ಗೊತ್ತಾ?
ಶುಕ್ರವಾರ, 9 ಆಗಸ್ಟ್ 2019 (09:06 IST)
ಬೆಂಗಳೂರು : ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ರೀತಿಯ ರೋಗಗಳಿಂದ ನಮ್ಮನ್ನು ಕಾಪಾಡುತ್ತದೆ. ಆದ್ದರಿಂದ ಬೆಳಗ್ಗೆ ಎದ್ದು ಫ್ರೆಶ್ ಆದ ನಂತರ ಒಂದು ಎಸಳು ಹಸಿ ಬೆಳ್ಳುಳ್ಳಿ ತಿನ್ನುವ ಅಭ್ಯಾಸ ರೂಢಿಸಿಕೊಂಡರೆ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು.
ಬೆಳ್ಳುಳ್ಳಿಯಲ್ಲಿರುವ ಅಲಿಸಿನ್(allicin) ಎಂಬ ಅಂಶ ಬ್ಯಾಕ್ಟಿರಿಯಾಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ. ಇದರಿಂದ ಹಸಿ ಬೆಳ್ಳುಳ್ಳಿ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೆಳ್ಳುಳ್ಳಿ ಸೇವನೆಯಿಂದ ಬಹುಬೇಗನೆ ನೆಗಡಿ, ಶೀತ ಕಡಿಮೆಯಾಗುವುದು. ದಿನಾ ಬೆಳಗ್ಗೆ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಹಾಗೇ ಮೈ ಬೊಜ್ಜು ಕೂಡ ಕರಗುತ್ತದೆ.
ಅಲ್ಲದೇ ಹಸಿ ಬೆಳ್ಳುಳ್ಳಿಯನ್ನು ಜಗಿದು ತಿನ್ನುವುದರಿಂದ ಹುಳುಕು ಹಲ್ಲಿನ ಸಮಸ್ಯೆ ಕಾಡುವುದಿಲ್ಲ. ಕೂದಲು ಉದುರುವ ಸಮಸ್ಯೆ ಇದ್ದರೆ ಬೆಳ್ಳುಳ್ಳಿ ರಸವನ್ನು ಕೂದಲಿನ ಬುಡಕ್ಕೆ ಹಚ್ಚಿದರೆ ಉತ್ತಮ ಪರಿಹಾರ ದೊರೆಯುತ್ತದೆ.