ಐಸಿಸಿ ಶ್ರೇಯಾಂಕದಲ್ಲಿ ಅಶ್ವಿನ್ ನಂ.1

ದುಬೈ: ಟೀಂ ಇಂಡಿಯಾ ಬೌಲರ್ ರವಿಚಂದ್ರನ್ ಅಶ್ವಿನ್ ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾ ಕೂಡಾ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದೆ.

ಟೀಂ ಇಂಡಿಯಾ115 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ 111ಅಂಕಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿದೆ.  ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ನ್ಯೂಜಿಲೆಂಡ್ ಸರಣಿಯಲ್ಲಿ ಅತೀ ವೇಗವಾಗಿ 200 ವಿಕೆಟ್ ಗಳಿಸಿದ ದಾಖಲೆಗೆ ಪಾತ್ರರಾಗಿದ್ದ ರವಿಚಂದ್ರನ್ ಅಶ್ವಿನ್ 900 ಅಂಕಗಳೊಂದಿಗೆ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ. ಭಾರತೀಯ ಆಟಗಾರರ ಪೈಕಿ ರವೀಂದ್ರ ಜಡೇಜಾ 861 ಅಂಕಗಳೊಂದಿಗೆ ಎಂಟನೇ ಸ್ಥಾನ ಪಡೆದುಕೊಂಡಿದ್ದಾರೆ.
ಅಲ್ಲದೆ ಅಶ್ವಿನ್ ಆಲ್ ರೌಂಡರ್ ಗಳ ಪೈಕಿಯೂ ಮೊದಲ ಸ್ಥಾನ ಪಡೆದಿದ್ದಾರೆ. ಜಡೇಜಾ ಕೂಡಾ ಆಲ್ ರೌಂಡರ್ ಗಳ ಪೈಕಿ ಟಾಪ್ 5 ಒಳಗೆ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಪರ ಅಗ್ರ ಹತ್ತರೊಳಗೆ ಸ್ಥಾನ ಪಡೆದವರೆಂದರೆ ಅಜಿಂಕ್ಯಾ ರೆಹಾನೆ ಮಾತ್ರ. ಅವರು ಆರನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ