ಐಪಿಎಲ್ 2022 ರ ಮೇಲೆ ಒಮಿಕ್ರಾನ್ ಭೀತಿ: ಸಭೆ ನಡೆಸಲು ಮುಂದಾದ ಬಿಸಿಸಿಐ
ಫೆಬ್ರವರಿಯಲ್ಲಿ ಹರಾಜು ಪ್ರಕ್ರಿಯೆ ನಡೆಸಿ ಏಪ್ರಿಲ್ ನಲ್ಲಿ ಭಾರತದಲ್ಲೇ ಐಪಿಎಲ್ ಕೂಟವನ್ನು ಆಯೋಜಿಸಲು ಬಿಸಿಸಿಐ ಯೋಜನೆ ರೂಪಿಸಿತ್ತು. ಆದರೆ ಈಗ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೂಟದ ಮೇಲೆ ಆತಂಕ ಮೂಡಿದೆ.
ಹೀಗಾಗಿ ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಮುಂದಿನ ತಿಂಗಳು ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಆಯ್ದ ಎರಡು ತಾಣಗಳಲ್ಲಿ ಲೀಗ್ ಪಂದ್ಯಗಳನ್ನು ನಡೆಸಿ ನಾಕೌಟ್ ಹಂತದ ಪಂದ್ಯಗಳನ್ನು ಇನ್ನೊಂದು ತಾಣದಲ್ಲಿ ನಡೆಸುವ ಸಾಧ್ಯತೆಯಿದೆ. ಈ ಬಗ್ಗೆ ಮುಂದಿನ ತಿಂಗಳು ಅಂತಿಮ ನಿರ್ಧಾರವಾಗಲಿದೆ.