ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾದ ಭಾರತದ ಉಪ ರಾಯಭಾರಿ

ಮಂಗಳವಾರ, 3 ಸೆಪ್ಟಂಬರ್ 2019 (08:48 IST)
ಪಾಕಿಸ್ತಾನ : ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದಲ್ಲಿರುವ ಭಾರತದ ಉಪ ರಾಯಭಾರಿ ಗೌರವ್ ಅಹ್ಲುವಾಲಿಯಾ ಭೇಟಿ ಮಾಡಿದ್ದಾರೆ.
ಅಂತರರಾಷ್ಟ್ರೀಯ ನ್ಯಾಯಾಲಯ, ವಿಯೆನ್ನಾ ಒಪ್ಪಂದ, ಪಾಕಿಸ್ತಾನದ ಕಾನೂನಿಗೆ ಅನುಗುಣವಾಗಿ ಭೇಟಿಗೆ ಅವಕಾಶ ನೀಡಲಾಗಿದ್ದು , ಪಾಕಿಸ್ತಾನ ಅನುಮತಿ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿ ಅಧಿಕಾರಿ ಗೌರವ್ ಅಹ್ಲುವಾಲಿಯಾ ಸೋಮವಾರ ಜಾಧವ್ ಅವರನ್ನು ಭೇಟಿಯಾಗಿ ಸುಮಾರು ಎರಡು ಗಂಟೆಗಳ ಕಾಲ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.


2017ರ ಎಪ್ರಿಲ್‌ನಲ್ಲಿ ಬೇಹಗಾರಿಕೆ ನಡೆಸಿದ ಸುಳ್ಳು ಆರೋಪದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನ ಬಂಧಿಸಿದ್ದು, ಸೇನಾ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಆ ಬಳಿಕ ಕುಲಭೂಷಣ್ ಜಾಧವ್‌ ಗೆ ಇದೇ ಮೊದಲ ಬಾರಿಗೆ. ಭಾರತೀಯ ರಾಯಭಾರಿ ಕಚೇರಿಯ ಸಂಪರ್ಕ ಒದಗಿಸಿರುವುದು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ