ಪ್ರಜೆಗಳಿಗೆ 1 ವರ್ಷ ಮಿಲಿಟರಿ ಸೇವೆ ಕಡ್ಡಾಯ
ಚೀನಾದಿಂದ ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯ ಮಿಲಿಟರಿ ಸೇವೆಯನ್ನು ನಾಲ್ಕು ತಿಂಗಳಿಂದ ಒಂದು ವರ್ಷಕ್ಕೆ ವಿಸ್ತರಿಸುವುದಾಗಿ ತೈವಾನ್ ಅಧ್ಯಕ್ಷೆ ತ್ಸೈ ಇಂಗ್-ವೆನ್ ಹೇಳಿದ್ದಾರೆ.
ಯಾರೂ ಯುದ್ಧವನ್ನು ಬಯಸುವುದಿಲ್ಲ. ಆದರೆ ಶಾಂತಿ ಆಕಾಶದಿಂದ ಬೀಳುವುದಿಲ್ಲ. ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಪ್ರಸ್ತುತ ಇರುವ ನಾಲ್ಕು ತಿಂಗಳ ತರಬೇತಿ ಸಾಲುವುದಿಲ್ಲ ಎಂದು ತಿಳಿಸಿದರು.