14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ

ಭಾನುವಾರ, 11 ಜೂನ್ 2023 (10:10 IST)
ಇಸ್ಲಾಮಾಬಾದ್ : ಕಿಡ್ನ್ಯಾಪ್ ಆಗಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಂಡು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ 14 ವರ್ಷದ ಹಿಂದೂ ಬಾಲಕಿಯನ್ನು ಆಕೆಯ ಪೋಷಕರ ಜೊತೆಗೆ ಕಳುಹಿಸಿಕೊಡಲು ಪಾಕಿಸ್ತಾನ ಕೋರ್ಟ್ ನಿರಾಕರಿಸಿದೆ.
 
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಲಾಗಿತ್ತು. ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೋಷಕರ ಜೊತೆಗೆ ಹೋಗಲು ಆಕೆ ಬಯಸಿದರೂ, ಕಳುಹಿಸಲು ಪಾಕ್ ಕೋರ್ಟ್ ನಿರಾಕರಿಸಿದೆ. 

ಜೂನ್ 2 ರಂದು ದಕ್ಷಿಣ ಸಿಂಧ್ ಪ್ರಾಂತ್ಯದ ಬೆನಜಿರಾಬಾದ್ ಜಿಲ್ಲೆಯ ನಿವಾಸಿಯಾಗಿದ್ದ ಬಾಲಕಿಯನ್ನು ಆಕೆಯ ತಾಯಿಯ ಮುಂದೆಯೇ ಗನ್ ತೋರಿಸಿ ಬೆದರಿಸಿ ಅಪಹರಿಸಲಾಗಿತ್ತು. ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ದೂರು ದಾಖಲಿಸಿದ್ದರು.

ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ಮುಸ್ಲಿಂ ವ್ಯಕ್ತಿಯೊಂದಿಗೆ ಆಕೆಯನ್ನು ಮದುವೆ ಮಾಡಲಾಗಿದೆ. ಈ ಸಂಬಂಧದ ವೀಡಿಯೋ ಕೂಡ ಮಾಡಲಾಗಿತ್ತು. ಅಪಹರಣಕ್ಕೊಳಗಾದ ಐದ ದಿನಗಳ ನಂತರ ಬಾಲಕಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಳಲು ತೋಡಿಕೊಂಡು ವೀಡಿಯೋ ಮಾಡಿದ್ದಳು. ನಂತರ ಕಾರ್ಯಪ್ರವೃತ್ತರಾದ ಮನೆಯವರು ಮನೆಯೊಂದರಿಂದ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ