ಗುತ್ತಿಗೆಗಾಗಿ 2,200 ಕೋಟಿ ಲಂಚದ ಆಮಿಷ ಆರೋಪ: ಅಮೆರಿಕ ಕೋರ್ಟ್‌ನಿಂದ ಅದಾನಿ ವಿರುದ್ಧ ಬಂಧನ ವಾರೆಂಟ್‌

Sampriya

ಗುರುವಾರ, 21 ನವೆಂಬರ್ 2024 (13:58 IST)
Photo Courtesy X
ವಾಷಿಂಗ್ಟನ್‌: ಅಮೆರಿಕದಲ್ಲಿ ಅದಾನಿ ಗ್ರೀನ್‌ ಎನರ್ಜಿಗಾಗಿ 6,000 ಮಿಲಿಯನ್‌ ಅಮೆರಿಕನ್‌ ಡಾಲರ್‌ ಬಾಂಡ್‌ ಬಿಡುಗಡೆ ಮಾಡಿ ಹೂಡಿಕೆ ಸಂಗ್ರಹಿಸಲು ಮುಂದಾಗಿದ್ದ ಅದಾನಿ ಸಂಸ್ಥೆಯ ಮುಖ್ಯಸ್ಥ ಗೌತಮ್‌ ಅದಾನಿ ಅವರಿಗೆ ಅಮೆರಿಕ ನ್ಯಾಯಾಂಗ ಇಲಾಖೆ ಶಾಕ್‌ ನೀಡಿದೆ.

ಗೌತಮ್‌ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ ಭರವಸೆ ನೀಡಿದ್ದಾರೆ ಎಂದು ಆರೋಪಿಸಿದೆ.

ನ್ಯೂಯಾರ್ಕ್‌ ಕೋರ್ಟ್‌ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಬಂಧನ ವಾರೆಂಟ್‌ ಹೊರಡಿಸಿದೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಅದಾನಿ, ಸೈರಿಲ್ ಕೆಬನೆಸ್,  ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರ ವಿರುದ್ಧ  ವಂಚನೆ ಪಿತೂರಿ  ಆರೋಪ ಮಾಡಲಾಗಿದೆ.  

ಮಹತ್ವದ ಬೆಳವಣಿಗೆಯ ಬೆನ್ನಲ್ಲೇ 6,000 ಮಿಲಿಯನ್‌ ಅಮೆರಿಕನ್‌ ಡಾಲರ್‌ ಬಾಂಡ್‌ ಬಿಡುಗಡೆ ಮಾಡಿ ಹೂಡಿಕೆ ಆಕರ್ಷಿಸಲು ಮುಂದಾಗಿದ್ದ ಅದಾನಿ ಗ್ರೀನ್ ಎನರ್ಜಿ ಕಂಪನಿಯು ತನ್ನ ನಿರ್ಧಾರದಿಂದ ಹಿಂದೆ ಸರಿಯುದಾಗಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ