ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ

ಸೋಮವಾರ, 2 ಜನವರಿ 2023 (13:25 IST)
ಇಸ್ಲಾಮಾಬಾದ್ : ಪಾಕಿಸ್ತಾನ ಭೀಕರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗಿದೆ.

ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹೊಸದೊಂದು ಫೋಟೋಗಳು ಹರಿದಾಡಿವೆ. ಬರೋಬ್ಬರು 32 ಸಾವಿರ ದ್ಯೋಗ ಆಕಾಂಕ್ಷಿಗಳು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿಗಾಗಿ ಲಿಖಿತ ಪರೀಕ್ಷೆ ಬರೆಯಲು ಕ್ರೀಡಾಂಗಣದಲ್ಲಿ ಪೆನ್ನು, ಪೇಪರ್ ಹಿಡಿದು ಕುಳಿತಿರುವುದು ಕಂಡುಬಂದಿದೆ.

ಶನಿವಾರ ಇಸ್ಲಾಮಾಬಾದ್ನ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ನಡೆದಿದ್ದು, ಸುಮಾರು 32 ಸಾವಿರ ಅಭ್ಯರ್ಥಿಗಳು ಸ್ಟೇಡಿಯಂನ ನೆಲದ ಮೇಲೆ ಕುಳಿತು ಪರೀಕ್ಷೆ ಬರೆದಿದ್ದಾರೆ.

ವರದಿಗಳ ಪ್ರಕಾರ ಪಾಕಿಸ್ತಾನದಾದ್ಯಂತ 1,667 ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಖಾಲಿಯಿದೆ. ಇದಕ್ಕಾಗಿ ಲಿಖಿತ ಪರೀಕ್ಷೆ ನೀಡಲು ಜಾಹೀರಾತು ನೀಡಲಾಗಿತ್ತು. ಈ ಹಿನ್ನೆಲೆ 30 ಸಾವಿರಕ್ಕೂ ಹೆಚ್ಚಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಉಳಿದಿವೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ