ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಬುಧವಾರ ಮುಂಜಾನೆ 4:49ರ ವೇಳೆಗೆ ಭೂಕಂಪನ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ.
ಕಾಬೂಲ್ನ 85 ಕಿ.ಮೀ ಸುತ್ತಳತೆಯಲ್ಲಿ ಭೂಮಿಯ ಮೇಲ್ಮೈಯಿಂದ ಕೇವಲ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ ತಿಳಿಸಿದೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ. ಇದೇ ತಿಂಗಳ 21 ರಂದು ಅಘ್ಘಾನಿಸ್ತಾನದಲ್ಲಿ ಭೂಕಂಪನ ಸಂಭವಿಸಿತ್ತು. ಭಾರತದಲ್ಲಿ ದೆಹಲಿ ಹಾಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭುಕಂಪನದ ಅನುಭವವಾಗಿತ್ತು.