ಉಕ್ರೇನ್ನ 4 ಪ್ರದೇಶಗಳು ರಷ್ಯಾ ವಶ : ಪುಟಿನ್
ಕ್ರೆಮ್ಲಿನ್ ಸಭಾಂಗಣದಲ್ಲಿ ಈ ಕುರಿತು ಮಾತನಾಡಿದ ಅವರು, ಉಕ್ರೇನ್ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದು 2ನೇ ವಿಶ್ವ ಯುದ್ಧದ ನಂತರ ಯೂರೋಪ್ನಲ್ಲಿಯೇ ಅತಿ ದೊಡ್ಡ ಸ್ವಾಧೀನವಾಗಿದೆ ಎಂದು ತಿಳಿಸಿದ್ದಾರೆ.
ಉಕ್ರೇನ್ನ ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಝಪೊರಿಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಪುಟಿನ್ ಜೀವನಕ್ಕಿಂತ ಹೆಚ್ಚು ಯುದ್ಧವನ್ನೇ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.