ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡದಲ್ಲಿ 73 ಮಂದಿ ಸಾವು!

ಶುಕ್ರವಾರ, 1 ಸೆಪ್ಟಂಬರ್ 2023 (07:38 IST)
ಕೇಪ್ ಟೌನ್ : ದಕ್ಷಿಣ ಆಫ್ರಿಕಾದ ಅತಿದೊಡ್ಡ ನಗರ ಜೋಹಾನ್ಸ್ಬರ್ಗ್ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿದು ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಎಂದು ತುರ್ತು ನಿರ್ವಹಣಾ ಸೇವೆ ಗುರುವಾರ ತಿಳಿಸಿದೆ.

ಗುರುವಾರ ಮುಂಜಾನೆ ಸಂಭವಿಸಿದ ಬೆಂಕಿಯಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತುರ್ತು ಸೇವಾ ವಿಭಾಗದ ವಕ್ತಾರ ರಾಬರ್ಟ್ ಮುಲಾಡ್ಜಿ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ 63 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹೆಚ್ಚಿನ ಜನರು ಒಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ರಾಬರ್ಟ್ ಮಾಹಿತಿ ನೀಡಿದ್ದಾರೆ. ಬೆಂಕಿ ಬಿದ್ದ ಕಟ್ಟಡದಲ್ಲಿ ಸುಮಾರು 200 ಮಂದಿ ವಾಸವಾಗಿದ್ದರು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ