ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್!

ಗುರುವಾರ, 16 ಮಾರ್ಚ್ 2023 (15:41 IST)
ವಾಷಿಂಗ್ಟನ್ : ಬಾಲಿವುಡ್ನ ಪಿಕೆ ಸಿನಿಮಾ ನೋಡಿದವರಿಗೆ ಈ ಒಂದು ಘಟನೆ ಥೇಟ್ ಅದರಂತೆಯೇ ಎನಿಸುತ್ತದೆ. ಅಮೆರಿಕದಲ್ಲಿ ವ್ಯಕ್ತಿಯೊಬ್ಬ ಬೀದಿಯಲ್ಲಿ ಬೆತ್ತಲಾಗಿ ಸಂಚರಿಸಿದ್ದಕ್ಕೆ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆತ ಅನ್ಯಗ್ರಹದಿಂದ ಬಂದಿರುವುದಾಗಿ ತಿಳಿಸಿದ್ದಾನೆ.
 
ಫ್ಲೋರಿಡಾದ ಪಾಮ್ ಬೀಚ್ನಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಬೆತ್ತಲಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಳಿಕ ಆತ ತಾನು ಬೇರೊಂದು ಗ್ರಹದಿಂದ ಬಂದಿದ್ದೇನೆ ಎಂದಿದ್ದಾನೆ. 

ಪೊಲೀಸರು ಬಂಧಿಸಿದಾಗ ಆತ ನಾನು ಬಟ್ಟೆಗಳನ್ನು ಎಲ್ಲಿ ಇಟ್ಟಿದ್ದೇನೋ ಗೊತ್ತಿಲ್ಲ ಎಂದಿದ್ದಾನೆ. ಆತ ತನ್ನ ಹೆಸರು ಅಥವಾ ಯಾವುದೇ ಗುರುತುಗಳನ್ನು ನೀಡಲು ನಿರಾಕರಿಸಿದ್ದಾನೆ. ಇದಾದ ಬಳಿಕ ಪೊಲೀಸರು ಆತನ ಬಗ್ಗೆ ಪತ್ತೆ ಹಚ್ಚಿ, ಹೆಸರನ್ನು ಜೇಸನ್ ಸ್ಮಿತ್ ಎಂದು ಗುರುತಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ