ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪ್ರಧಾನಿ ಇಮ್ರಾನ್ ಖಾನ್ ರಿಂದ ಹೊಸ ಪ್ಲ್ಯಾನ್
ಸೋಮವಾರ, 27 ಆಗಸ್ಟ್ 2018 (12:43 IST)
ಇಸ್ಲಾಮಾಬಾದ್ : ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿಯನ್ನು ಬಲಗೊಳಿಸಲು ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ.
ಶನಿವಾರ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ರಾಷ್ಟ್ರಾಧ್ಯಕ್ಷರು ಮತ್ತು ಪ್ರಧಾನಮಂತ್ರಿ ಸೇರಿದಂತೆ ಪ್ರಮುಖ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ನಿಧಿಯನ್ನು ವಿವೇಚನಾರಹಿತವಾಗಿ ಖರ್ಚು ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಈ ಮೂಲಕ ಇವರ ಪ್ರಥಮ ದರ್ಜೆ ವಿಮಾನಯಾನಕ್ಕೆ ಲಗಾಮು ಹಾಕಲಾಗಿದೆ.
ಈ ವಿಚಾರವನ್ನು ವಾರ್ತಾ ಮಂತ್ರಿ ಫವದ್ ಚೌಧರಿ ಅವರು ತಿಳಿಸಿದ್ದು, ಪಾಕಿಸ್ತಾನ ಅಧ್ಯಕ್ಷರು, ಪ್ರಧಾನಮಂತ್ರಿ, ಕೇಂದ್ರ ಸಚಿವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸೆನೆಟ್ ಅಧ್ಯಕ್ಷರು, ರಾಷ್ಟ್ರೀಯ ಸಂಸತ್ತಿನ ಸ್ಪೀಕರ್ ಹಾಗೂ ರಾಜ್ಯಗಳು/ಪ್ರಾಂತ್ಯಗಳ ಮುಖ್ಯಮಂತ್ರಿಗಳೂ ಸೇರಿದಂತೆ ಸರ್ಕಾರದ ಎಲ್ಲ ಉನ್ನತಾಧಿಕಾರಿಗಳು ಪ್ರಥಮ ದರ್ಜೆ ವಿಮಾನಯಾನ ಮಾಡುವಂತಿಲ್ಲ. ಇವರೆಲ್ಲರೂ ಕ್ಲಬ್/ಬ್ಯುಸಿನೆಸ್ ಕ್ಲಾಸ್‍ನಲ್ಲಿ ಮಾತ್ರ ಪ್ರಯಾಣಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ