ಶಿಬಿರದಲ್ಲಿ ಭೀಕರ ಅಗ್ನಿ ಅವಘಡ ! 7 ಮಕ್ಕಳು ಸೇರಿ 21 ಸಾವು
ಗಾಜಾದ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಹೊತ್ತಿಕೊಂಡಿದೆ. 4 ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿ ಸ್ಫೋಟಗೊಂಡಿದ್ದು, ಭಾರೀ ಬೆಂಕಿ ಉಂಟಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು 1 ಗಂಟೆಗೂ ಅಧಿಕ ಸಮಯ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ತನಿಖೆಯ ಪ್ರಕಾರ ಕಟ್ಟಡದೊಳಗೆ ಹೆಚ್ಚಿನ ಪ್ರಮಾಣದ ಗ್ಯಾಸೋಲಿನ್ ಅನ್ನು ಸಂಗ್ರಹಿಸಲಾಗಿದ್ದು, ಇದು ಬೆಂಕಿಯ ಪ್ರಮಾಣ ಹೆಚ್ಚಲು ಕಾರಣವಾಗಿದೆ. ಕಟ್ಟಡದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ಯಾರೊಬ್ಬರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.