ವಾಷಿಂಗ್ಟನ್ : ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.
ಗರ್ಭಪಾತಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಹಕ್ಕು ಎಂದು ಘೋಷಿಸಲಾಗಿದ್ದ 1973ರ ತೀರ್ಪನ್ನು ಅಮೆರಿಕ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಇದನ್ನು ವಿರೋಧಿಸುತ್ತಿರುವ ಮಹಿಳೆಯರು ನಮ್ಮ ದೇಹ, ನಮ್ಮ ಹಕ್ಕು ಎಂದು ಬರೆದಿರುವ ಪೋಸ್ಟರ್ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಅಮೆರಿಕದಲ್ಲಿ ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ್ದರೂ ವಾಲ್ಟ್ ಡಿಸ್ನಿ, ಮೆಟಾದಂತಹ ಹಲವಾರು ದೈತ್ಯ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರ್ಭಪಾತ ಮಾಡಿಸಲು ಇತರ ದೇಶಗಳಿಗೆ ಹೋಗಲು ಸಹಾಯ ಮಾಡುವುದಾಗಿ ತಿಳಿಸಿದೆ.