ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಈ ಮಧ್ಯೆ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.
ಸದ್ಯದ ಮಾಹಿತಿ ಪ್ರಕಾರ ಮೃತರ ಸಂಖ್ಯೆ 900ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 3,000 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡವರಿಗಾಗಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಭಾನುವಾರ ರಾತ್ರಿ ಗುಡ್ಡಗಾಡು ಪ್ರಾಂತ್ಯದಲ್ಲಿ 6,0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿವೆ. ಈ ಭೂಕಂಪದ ತೀವ್ರತೆಗೆ ಗ್ರಾಮಗಳು ನೆಲಸಮಗೊಂಡು, ಹಲವಾರು ಗಂಟೆಗಳ ಕಾಲ ಜನರು ಅವಶೇಷಗಳಡಿ ಸಿಲುಕಿದ್ದರು.
ಗಾಯಾಳುಗಳನ್ನು ತೆರವುಗೊಳಿಸಲಾಗಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ವಕ್ತಾರರು ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಭೂಕಂಪನದಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇದರಿಂದ ರಸ್ತೆಗಳು ಮುಚ್ಚಿ ಹೋಗಿವೆ. ಆದರೆ, ಅವುಗಳನ್ನು ಮತ್ತೆ ತೆರವುಗೊಳಿಸಲಾಗಿದ್ದು, ತಲುಪಲು ಕಠಿಣವಾಗಿರುವ ಪ್ರದೇಶಗಳಿಗೆ ಪ್ರವೇಶ ಒದಗಿಸಲು ಉಳಿದ ರಸ್ತೆಗಳನ್ನೂ ತೆರವುಗೊಳಿಸಲಾಗುವುದು ಹೇಳಿದ್ದಾರೆ.