ಕಾಬೂಲ್: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಕ್ರಿಕೆಟಿಗರು ಸಾವನ್ನಪ್ಪಿದ್ದು ಕ್ರಿಕೆಟಿಗ ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ಡುರಾಂಡ್ ಲೈನ್ ಬಾರ್ಡರ್ ನಲ್ಲಿ 12 ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದ್ದರು.
ಇದೀಗ ಮತ್ತೊಮ್ಮೆ ಪಾಕಿಸ್ತಾನ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಇವರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ.
ಇದು ಅಫ್ಘಾನಿಸ್ತಾನದಲ್ಲಿ ಭಾರೀ ಆಕ್ರೋಶವುಂಟು ಮಾಡಿದೆ. ಈ ಬಗ್ಗೆ ಕ್ರಿಕೆಟಿಗ ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶವನ್ನು ಪ್ರತಿನಿಧಿಸುವ ಯುವ ಕ್ರಿಕೆಟಿಗರು, ಮಹಿಳೆಯರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದು ಅತ್ಯಂತ ಬೇಸರದ ಸಂಗತಿ. ಪಾಕಿಸ್ತಾನ ದಾಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದು ಅತ್ಯಂತ ಹೇಯ ಕೃತ್ಯ ಎಂದು ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.