ವಾಷಿಂಗ್ಟನ್ : ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರದ ವಿಚಾರದಲ್ಲಿ ಭಾರತ ಸರ್ಕಾರಕ್ಕೆ ಅಮೆರಿಕ ಶಾಕ್ ನೀಡಿ ಪರೋಕ್ಷವಾಗಿ ಬಿಬಿಸಿಯನ್ನು ಸಮರ್ಥಿಸಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನದ ಪತ್ರಕರ್ತರೊಬ್ಬರು ಬಿಬಿಸಿ ಸಾಕ್ಷ್ಯಚಿತ್ರದ ಮೇಲಿನ ನಿಷೇಧ ಪತ್ರಿಕಾ ಸ್ವಾತಂತ್ರ್ಯ ಅಥವಾ ವಾಕ್ ಸ್ವಾತಂತ್ರ್ಯದ ವಿಷಯವೇ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಪ್ರತಿನಿಧಿ ನೆಡ್ ಪ್ರೈಸ್ ಅವರನ್ನು ಪ್ರಶ್ನಿಸಿದ್ದಾರೆ.
ಈ ವಿಷಯಕ್ಕೆ ಬಂದಾಗ, ನಾವು ಪ್ರಪಂಚದಾದ್ಯಂತ ಮುಕ್ತ ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೇವೆ ಎಂದು ಪ್ರೈಸ್ ಉತ್ತರಿಸಿದ್ದಾರೆ. ಮುಕ್ತ ಪತ್ರಿಕಾ ಸ್ವಾತಂತ್ರ್ಯ ಪ್ರಜಾತಂತ್ರದ ಮೌಲ್ಯಗಳನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತಷ್ಟು ಬಲಪಡಿಸುತ್ತದೆ. ಇದೇ ನಿಲುವು ಭಾರತಕ್ಕೂ ಅನ್ವಯಿಸುತ್ತದೆ ಎಂದು ಹೇಳಿದರು.