ಪಾರಂಪರಿಕ ಮಾಸ ಆಚರಿಸಲು ಮುಂದಾದ ಅಮೇರಿಕ

ಬುಧವಾರ, 27 ಅಕ್ಟೋಬರ್ 2021 (12:39 IST)
ಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲಾಗುತ್ತಿದೆ.
ಅಮೆರಿಕದ 50 ರಾಜ್ಯಗಳ ಪೈಕಿ 20 ರಾಜ್ಯಗಳಲ್ಲಿ ಹಾಗೂ 40 ಕ್ಕೂ ಹೆಚ್ಚು ನಗರಗಳಲ್ಲಿ ಈ ಬಗ್ಗೆ ಘೋಷಣೆಯನ್ನು ಮಾಡಲಾಗಿದೆ ಅಂತ ಸಮುದಾಯದ ನಾಯಕರು ತಿಳಿಸಿದ್ದಾರೆ. ಅಮೆರಿಕದಲ್ಲಿ ಅಲ್ಪಸಂಖ್ಯಾತ ಸಮುದಾಯವಾಗಿರುವ ಹಿಂದೂ ಸಮುದಾಯದ ಕೊಡುಗೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸ ಎಂಬ ಘೋಷಣೆಯನ್ನು ಅಧಿಕೃತಗೊಳಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಹಿಂದೂಗಳು ಅಕ್ಟೋಬರ್ ತಿಂಗಳ ಆಸುಪಾಸಿನಲ್ಲಿ ನವರಾತ್ರಿ, ದಸರಾ, ದುರ್ಗಾ ಪೂಜೆ, ದೀಪಾವಳಿ ಹಬ್ಬಗಳನ್ನು ಆಚರಿಸುತ್ತಾರೆ. ಹಾಗಾಗಿ ಅಕ್ಟೋಬರ್ ತಿಂಗಳನ್ನು ಹಿಂದೂಗಳ ಪಾರಂಪರಿಕ ಮಾಸವನ್ನಾಗಿ ಆಚರಿಸಲು ನಿರ್ಧರಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ