ಅಮೆರಿಕಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ತನಿಖೆಗೆ ಹೆಚ್ಚಿದ ಒತ್ತಾಯ

Sampriya

ಭಾನುವಾರ, 9 ಮಾರ್ಚ್ 2025 (12:37 IST)
Photo Courtesy X
ನ್ಯೂಯಾರ್ಕ್: ಅಮೆರಿಕಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. ಈ ಬಾರಿ ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಐಕಾನಿಕ್ ಬಿಎಪಿಎಸ್‌ ದೇವಾಲಯ ಧ್ವಂಸವಾಗಿದೆ.

ಕ್ಯಾಲಿಫೋರ್ನಿಯಾದ ಅತಿದೊಡ್ಡ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಬರಹ ಬರೆಯಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಚಿನೋ ಹಿಲ್ಸ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರ ಅಪವಿತ್ರಗೊಂಡಿದೆ ಎಂದು ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ಹೇಳಿದ್ದು, ತನಿಖೆಗೆ ಒತ್ತಾಯಿಸಿದೆ.

ಸೆಪ್ಟೆಂಬರ್‌ನಲ್ಲಿ, ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯದ ಮೇಲೆ ಹಿಂದೂಗಳೇ ಹಿಂದಿರುಗಿ! ಎಂದು ಬರೆಯಲಾಗಿತ್ತು. ಈ ಘಟನೆಗೆ ಸುಮಾರು 10 ದಿನಗಳ ಮೊದಲು, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಮತ್ತೊಂದು ಬಿಎಪಿಎಸ್‌ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ದ್ವೇಷಪೂರಿತ ಸಂದೇಶಗಳಿಂದ ವಿರೂಪಗೊಳಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ