ನವಾಜ್ ಷರೀಫ್‌ಗೆ ಪಾಠ ಕಲಿಸಲು ಚುನಾವಣೆ ಕಣಕ್ಕೆ: ಆಸೀಫ್ ಅಲಿ ಜರ್ದಾರಿ

ಬುಧವಾರ, 28 ಡಿಸೆಂಬರ್ 2016 (16:15 IST)
ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ಗೆ ಪಾಠ ಕಲಿಸಲು ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಮುಖ್ಯಸ್ಥ ಆಸೀಫ್ ಅಲಿ ಜರ್ದಾರಿ ಮತ್ತು ಅವರ ಪುತ್ರ ಬಿಲಾವಲ್ ಭುಟ್ಟೋ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 
ಮಾಜಿ ಪ್ರಧಾನಿ ಬೇನಜೀರ್ ಭುಟ್ಟೋ ಅವರ 9ನೇ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜರ್ದಾರಿ, ತಮ್ಮ ಸಹೋದರಿಯ ಕ್ಷೇತ್ರವಾದ ನವಾಬ್‌ಶಾಹ್ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದರೇ ತಮ್ಮ ಕ್ಷೇತ್ರವಾದ ಲರ್ಕಾನಾದಲ್ಲಿ ಪುತ್ರ ಬಿಲಾವಲ್ ಸ್ಪರ್ಧೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. 
 
ದೇಶದಲ್ಲಿ ಪ್ರಜಾಪ್ರಭುತ್ವ ಜಾರಿಯಾಗಲು ಅನೇಕ ತ್ಯಾಗಗಳನ್ನು ಮಾಡಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ತಿಳಿಸಿದ್ದಾರೆ. 
 
ದೇಶದಲ್ಲಿದ್ದ ಸರ್ವಾಧಿಕಾರಿಗಳ ವಿರುದ್ಧ ಹೋರಾಟ ಮಾಡಿದ್ದೇವೆ. ಆದರೆ, ಯಾವತ್ತೂ ಸೇನೆಯ ವಿರುದ್ಧ ಧ್ವನಿ ಎತ್ತಿಲ್ಲ. ನಿಮ್ಮ ಸರಕಾರವನ್ನು ಉರುಳಿಸಲು ಸಂಸತ್ತಿಗೆ ಬರುತ್ತಿಲ್ಲ. ಸರಕಾರಕ್ಕೆ ಪಾಠ ಕಲಿಸುವುದೇ ನನ್ನ ಉದ್ದೇಶವಾಗಿದ್ದು, ಕೆಲ ರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಾಗಿದೆ ಎಂದು ಪಿಪಿಪಿ ಮುಖ್ಯಸ್ಥ ಆಸೀಫ್ ಅಲಿ ಜರ್ದಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ