ಯೋಗ ಕಾರ್ಯಕ್ರಮದ ವೇಳೆ ದಾಳಿ!

ಮಂಗಳವಾರ, 21 ಜೂನ್ 2022 (14:13 IST)
ಮಾಲ್ಡೀವ್ಸ್‌ : ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಮಾಲ್ಡೀವ್ಸ್ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಗುಂಪೊಂದು ನುಗ್ಗಿ ಯೋಗ ಮಾಡಿದ್ದವರನ್ನು ಅಡ್ಡಿ ಪಡಿಸಿದ ಘಟನೆ ನಡೆದಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿಶ್ವದೆಲ್ಲೆಡೆ ಯೋಗ ಮಾಡಿ ಯೊಗ ದಿನವನ್ನು ಆಚರಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್ನ ಯುವ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯವು ಭಾರತೀಯ ಸಾಂಸ್ಕೃತಿಕ ಕೇಂದ್ರದೊಂದಿಗೆ ಮಂಗಳವಾರ ಗಲೋಲ್ಹು ಕ್ರೀಡಾಂಗಣದಲ್ಲಿ ಧ್ಯಾನ ಮತ್ತು ಯೋಗವನ್ನು ಆಯೋಜಿಸಿತ್ತು. ಆದರೆ ಅಲ್ಲಿಗೆ ಬಂದ ಗುಪೊಂದು ಯೋಗಾಭ್ಯಾಸಕ್ಕೆ ಅಡ್ಡಿ ಪಡಿಸಿ ಪ್ರತಿಭಟನೆ ನಡೆಸಿದೆ.

ಆ ಗುಂಪು ಯೋಗಾಭ್ಯಾಸದಲ್ಲಿ ಪಾಲ್ಗೊಂಡವರು ಕೂಡಲೇ ಕ್ರೀಡಾಂಗಣವನ್ನು ತೆರವು ಮಾಡಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಬೆದರಿಕೆಯನ್ನು ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ