ಕೇಂದ್ರ ಸರ್ಕಾರಕ್ಕೆ ಚೀನಾ ಆ್ಯಪ್ ಬೇಡ ಆದರೆ ಧ್ವಜ ಬೇಕು??

ಶುಕ್ರವಾರ, 22 ಜುಲೈ 2022 (19:20 IST)
ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
 
ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, 'ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ. ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದಿದ್ದಾರೆ.
 
'ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಬಿಜೆಪಿ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ 'ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ' ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ' ಎಂದು ತಿಳಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ