ಡೆಹ್ರಾಡೂನ್ : ಫೇಸ್ಬುಕ್ನಲ್ಲಿ ಪರಿಚಯವಾದ ಯುವಕನೊಬ್ಬ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ,
ಆಕೆಯಿಂದ ಖಾಸಗಿ ವೀಡಿಯೋಗಳನ್ನು ಕಳಿಸಿಕೊಂಡ ನಂತರ ತನ್ನ ಸ್ನೇಹಿತರೊಂದಿಗೂ ದೈಹಿಕ ಸಂಪರ್ಕ ಬೆಳೆಸುವಂತೆ ಕಿರುಕುಳ ನೀಡಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ.
ಯುವಕ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಹುಡುಗಿ ನೀಡಿದ ದೂರಿನ ಮೇರೆಗೆ ದಿನೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಐಪಿಸಿ ಸೆಕ್ಷನ್ 376 (ಬಲವಂತದ ಸಂಭೋಗ), 304 (ಕೊಲೆ ಎಂದು ಪರಿಗಣಿಸಲಾದ ಆಪರಾಧಿಕ ಮಾನವ ಹತ್ಯೆ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.