ಶಿಕ್ಷಣ ಕೇಂದ್ರದಲ್ಲಿ ಬಾಂಬ್ ಸ್ಫೋಟ!
ಭಾರತೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಕಾಜ್ ಶಿಕ್ಷಣ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ತಿಳಿಸಿದ್ದಾರೆ.
ದುರದೃಷ್ಟವಶಾತ್ ಸ್ಫೋಟವು ಮಾನವ ಸಾವು-ನೋವುಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಜದ್ರಾನ್ ಹೇಳಿದ್ದಾರೆ.
ಹಜಾರಾ ನೆರೆಹೊರೆಯಲ್ಲಿರುವ ಕಾಜ್ ಶೈಕ್ಷಣಿಕ ಕೇಂದ್ರವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್, ವಿದ್ಯಾರ್ಥಿಗಳ ನಡುವೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಟ್ವಿಟರ್ ಪೋಸ್ಟ್ನಲ್ಲಿ ಎನ್ಜಿಒ ಆಫ್ಘನ್ ಪೀಸ್ ವಾಚ್ ತಿಳಿಸಿದೆ.