ಕಮರಿಗೆ ಉರುಳಿದ ಬಸ್: ಏಳು ಮಂದಿ ದುರ್ಮರಣ!

ಸೋಮವಾರ, 21 ಆಗಸ್ಟ್ 2023 (09:55 IST)
ಡೆಹ್ರಾಡೂನ್ : ಬಸ್ ಕಮರಿಗೆ ಉರುಳಿದ ಪರಿಣಾಮ 7 ಮಂದಿ ಸಾವಿಗೀಡಾಗಿ, 27 ಜನ ಗಾಯಗೊಂಡ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಡೆದಿದೆ.

ಬಸ್ ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತು ಗಂಗೋತ್ರಿಯಿಂದ ವಾಪಾಸ್ ಆಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವಿಗೀಡಾಗಿದ್ದಾರೆ. ಬಸ್ನಲ್ಲಿ 35 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. 

ಈ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಪ್ರತಿಕ್ರಿಯಿಸಿದ್ದು, ರಕ್ಷಣಾ ಕಾರ್ಯಕ್ಕೆ ಸೂಚಿಸಿದ್ದಾರೆ. ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ