ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ: 80 ಕ್ಕೂ ಹೆಚ್ಚು ಜನ ಸಾವು
ಬುಧವಾರ, 31 ಮೇ 2017 (13:13 IST)
ತಾಲಿಬಾನ್ ಉಗ್ರರು ನಡೆಸಿದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 100 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ರಾಯಭಾರಿ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು, ರಾಯಭಾರಿ ಕಚೇರಿಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಾವು ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ನ್ಯಾಟೋ ಪಡೆ ಮತ್ತು ಅಫ್ಘಾನಿಸ್ತಾನದ ಸೇನಾಪಡೆಗಳು ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ ಕೈಗೊಂಡಿದ್ದರಿಂದ ಸೇಡು ತೀರಿಸಿಕೊಳ್ಳಲು ಉಗ್ರರು ಇಂತಹ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.