ಈ ಸೆರಾಮಿಕ್ಸ್ ಫ್ಯಾಕ್ಟರಿ ಬಳಿ ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಈ ಅವಗಢ ಸಂಭವಿಸಿದ್ದು, ಈ ದುರಂತದಲ್ಲಿ 18 ಮಂದಿ ಭಾರತೀಯರು ಮೃತಪಟ್ಟಿರುವುದಾಗಿ ಸೂಡಾನ್ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ. ಹಾಗೂ ಈ ಘಟನೆಯಲ್ಲಿ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇವರಲ್ಲಿ 7 ಕಾರ್ಮಿಕರ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ.
ದುರಂತ ನಡೆದ ಸ್ಥಳದಲ್ಲಿ ಅಗ್ನಿ ಸುರಕ್ಷತಾ ಕ್ರಮ ಇರದಿದ್ದ ಕಾರಣ ಹಾಗೂ ಬೆಂಕಿ ಹತ್ತಿಕೊಳ್ಳುವ ವಸ್ತುಗಳನ್ನು ಸುರಕ್ಷತೆ ಇಲ್ಲದೆ ಸಂಗ್ರಹಿಸಿಟ್ಟ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.