ಸಿಕ್ಕಿನ ಗಡಿಯಲ್ಲಿ ಭಾರತ ಹಾಗೂ ಚೀನಾ ಸೇನೆಗಳು ಮುಖಾಮುಖಿಯಾಗಿರುವ ಹಿನ್ನಲೆಯಲ್ಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಜಿ20 ದೇಶಗಳ ಶೃಂಗ ಸಭೆಯಲ್ಲಿ ಉಭಯ ದೇಶಗಳ ನಾಯಕರು ಪಾಲ್ಗೊಳ್ಳುವರಾದರೂ ಅವರ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯದೆಂದು ಚೀನ ಖಡಕ್ ಆಗಿ ತಿಳಿಸಿದೆ. ಗಡಿ ಬಿಕ್ಕಟ್ಟು ನಿವಾರಣೆ ಸಂಬಂಧ ಯಾವುದೇ ಅರ್ಥಪೂರ್ಣ ಮಾತುಕತೆ ನಡೆಸುವುದಕ್ಕೆ ಮುನ್ನ ಭಾರತ ತನ್ನ ಸೇನೆಯನ್ನು ಹಿಂದೆಗೆದುಕೊಂಡು ಸಿಕ್ಕಿಂ ಗಡಿಯಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕು ಎಂದು ಚೀನಾ ತಿಳಿಸಿತ್ತು.