ಪಾಕಿಸ್ತಾನ : ಪಾಕಿಸ್ತಾನದ ಮಾಜಿ ಪ್ರಧಾನಿ ಯೂಸುಫ್ ರಝಾ ಗಿಲಾನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿಂತೆ ವಿಚಾರಣೆಗೆಂದು ನ್ಯಾಶನಲ್ ಅಕೌಂಟಬಿಲಿಟಿ ಬ್ಯೂರೋದ ಕಚೇರಿಗೆ ಹಾಜರಾದ ಬಳಿಕ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗಿಲಾನಿಯ ಮಗ ಕಾಸಿಂ ಗಿಲಾನಿ, ಧನ್ಯವಾದ ಇಮ್ರಾನ್ ಖಾನ್ ಸರ್ಕಾರ ಮತ್ತು ನ್ಯಾಶನಲ್ ಅಕೌಂಟಬಿಲಿಟಿ ಬ್ಯೂರೋ! ನೀವು ನನ್ನ ತಂದೆಯ ಜೀವವನ್ನು ಯಶಸ್ವಿಯಾಗಿ ಅಪಾಯಕ್ಕೆ ತಳ್ಳಿದ್ದೀರಿ. ಅವರು ಈಗ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.