ಬಾಂಗ್ಲಾದೇಶದಲ್ಲಿ ‘ಕೋಟಾ ಸಿಸ್ಟಮ್‌’ ರದ್ದು!

ಶನಿವಾರ, 14 ಏಪ್ರಿಲ್ 2018 (08:43 IST)
ಢಾಕಾ : ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು  ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸುವ ‘ಕೋಟಾ ಸಿಸ್ಟಮ್‌' ಅನ್ನು ವಿದ್ಯಾರ್ಥಿಗಳ ಚಳವಳಿಗೆ ಮಣಿದು ರದ್ದು ಮಾಡಲು ತಿರ್ಮಾನ ಮಾಡಿದ್ದಾರೆ.


ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಕೋಟಾ ಕಲ್ಪಿಸುವ ವ್ಯವಸ್ಥೆಯ ವಿರುದ್ಧ ಢಾಕಾದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.


ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರಕಾರ ಪೊಲೀಸರನ್ನು ನಿಯೋಜಿಸಿತ್ತು. ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವಿನ ಸಂಘರ್ಷದಲ್ಲಿ  100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಪ್ರಧಾನಿ ಹಸೀನಾ ಅವರು  ಸರಕಾರಿ ಉದ್ಯೋಗದಲ್ಲಿರುವ ಕೋಟಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದು ಪಡಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

 



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ