ಮಾನಹಾನಿ ಕೇಸ್ : ಕೋಟಿ ಪಾವತಿಸುವಂತೆ ಕೋರ್ಟ್ ಆದೇಶ

ಗುರುವಾರ, 6 ಏಪ್ರಿಲ್ 2023 (06:55 IST)
ವಾಷಿಂಗ್ಟನ್ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ನೀಲಿಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್ಗೆ ಸೋಲಾಗಿದೆ. ಹೀಗಾಗಿ ಟ್ರಂಪ್ ಅವರ ವಕೀಲರಿಗೆ 121,000 ಡಾಲರ್ ಮೊತ್ತ (ಸುಮಾರು 1 ಕೋಟಿ ರೂ.) ಪಾವತಿಸುವಂತೆ ಕ್ಯಾಲಿಫೋರ್ನಿಯಾದ ಸರ್ಕ್ಯೂಟ್ ನ್ಯಾಯಾಲಯವು ಸೂಚಿಸಿದೆ.

ಟ್ರಂಪ್ ವಿರುದ್ಧ ಯಾವುದೇ ಆರೋಪ ಮಾಡದಂತೆ ಟ್ವಿಟ್ಟರ್ನಲ್ಲಿ ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದ. ತನ್ನ ವಿರುದ್ಧ ಟ್ರಂಪ್ ಕಡೆಯವರೇ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸ್ಟಾರ್ಮಿ ಡೇನಿಯಲ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಾಬೀತಾಗದ ಹಿನ್ನೆಲೆಯಲ್ಲಿ ಕೋರ್ಟ್ ಸ್ಟಾರ್ಮಿ ಡೇನಿಯಲ್ಸ್ಗೆ ದಂಡ ವಿಧಿಸಿದೆ.

ಸ್ಟಾರ್ಮಿ ಡೇನಿಯಲ್ಸ್ ಹಾಗೂ ಟ್ರಂಪ್ ನಡುವಿನ ಸಂಬಂಧ ಮರೆಮಾಚಲು ಆಕೆಗೆ ಹಣ ಪಾವತಿಸಲಾಗಿತ್ತು ಎಂಬ ಪ್ರಕರಣದಲ್ಲಿ ಬಂಧಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿತ್ತು. ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ