ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯಲ್ಲಿ ನೀಡಿದ ಪ್ರಶಸ್ತಿ ಯಾವುದು ಗೊತ್ತಾ?

ಭಾನುವಾರ, 25 ಆಗಸ್ಟ್ 2019 (09:10 IST)
ಅಬುಧಾಬಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಝಾಯೆದ್' ಅನ್ನು ನೀಡಿ ಗೌರವಿಸಲಾಗಿದೆ.



ಸಂಯುಕ್ತ ಅರಬ್ ಸಂಸ್ಥಾನದ ಸ್ಥಾಪಕ ಶೇಖ್ ಝಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಸ್ಮರಣಾರ್ಥವಾದ ಈ ಪ್ರಶಸ್ತಿಯನ್ನು ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ರಾಣಿ ಎಲಿಝಬೆತ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಪ್ರದಾನ ಮಾಡಲಾಗಿತ್ತು.


ಆದರೆ ಎರಡು ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಲು ಪ್ರಧಾನಿ ಮೋದಿ ಅವರು ಪಟ್ಟ ಶ್ರಮವನ್ನು ಗುರುತಿಸಿ ಅವರಿಗೆ  'ಶೇಕ್ ಝಾಯೆದ್ ಅವರ ಜನ್ಮಶತಮಾನೋತ್ಸವ ಸಂದರ್ಭ ಈ ಪ್ರಶಸ್ತಿಯನ್ನು ನೀಡುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿದೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ