ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮಲಮಗಳಿಗೆ ತಂದೆ ಮಾಡಿದ್ದೇನು ಗೊತ್ತಾ?
ಗುರುವಾರ, 14 ನವೆಂಬರ್ 2019 (10:38 IST)
ಸಿಂಗಾಪುರ : ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ 41 ವರ್ಷದ ತಂದೆ 15 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಘಟನೆ ಸಿಂಗಾಪುರದಲ್ಲಿ ನಡೆದಿದೆ.
ಶಾಲೆಗೆ ಕರೆದುಕೊಂಡು ಹೋಗುವಂತೆ ಹೇಳಿದ ಮಗಳನ್ನು ತಂದೆ ಕಟ್ಟಡವೊಂದರ ಪಾರ್ಕಿಂಗ್ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈ ದೃಶ್ಯ ಪೊಲೀಸರ ಕಣ್ಣಿಗೆ ಬಿದ್ದಿದ್ದು, ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಮೊದಲು ಆರೋಪವನ್ನು ಅಲ್ಲಗೆಳೆದ ತಂದೆ ಬಳಿಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಕೋರ್ಟ್ ಆತನನ್ನು ಅಪರಾಧಿಯೆಂದು ತೀರ್ಪು ನೀಡಿದೆ.