ಮಾಲ್ಡೀವ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅಲ್ಲಿನ ಅಧ್ಯಕ್ಷರಿಗೆ ನೀಡಿದ ಉಡುಗೊರೆ ಏನು ಗೊತ್ತಾ?

ಭಾನುವಾರ, 9 ಜೂನ್ 2019 (07:13 IST)
ಮಾಲ್ಡೀವ್ಸ್ : ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇದೀಗ ಮಾಲ್ಡೀವ್ಸ್ ಗೆ ಭೇಟಿ ನೀಡಿದ್ದು, ಅಲ್ಲಿನ ಅಧ್ಯಕ್ಷರಿಗೆ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾರೆ.
ಹೌದು. ಎರಡನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡಿರುವ ಮೋದಿ ಅವರು ದ್ವೀಪ ರಾಷ್ಟ್ರಗಳಾದ ಶ್ರೀಲಂಕಾ ಮತ್ತು ಮಾಲ್ಡೀವ್ಸ್ಗೆ ಹೋಗಲು ನಿರ್ಧರಿಸಿದ್ದಾರೆ.


ಅದರಂತೆ ಇದೀಗ ಮಾಲ್ಡೀವ್ಸ್ ಗೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಅದ್ದೂರಿ ಸ್ವಾಗತ ನೀಡಿದ್ದು, ಈ ವೇಳೆ ಪ್ರಧಾನಿ ಮೋದಿ ಮಾಲ್ಡೀವ್ಸ್ ಅಧ್ಯಕ್ಷ ರಿಗೆ ಭಾರತೀಯ ಕ್ರಿಕೆಟ್ ಆಟಗಾರರ ಸಹಿ ಇರುವ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ