ರಷ್ಯಾ ನಡೆಸಿದ ದಾಳಿಗೆ ಶಿಕ್ಷೆ ಏನು ಗೊತ್ತ?

ಮಂಗಳವಾರ, 1 ಮಾರ್ಚ್ 2022 (09:03 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಶಿಕ್ಷೆಯಾಗಿ ವಿದೇಶಿ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ರಷ್ಯಾದ ವಿಮಾನ ಹಾಗೂ ಹಡಗುಗಳನ್ನು ಜಾಗತಿಕವಾಗಿ ನಿಷೇಧಿಸಬೇಕು ಎಂದು ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒತ್ತಾಯಿಸಿದರು.
 
ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಅವರು, ನಾವು ಎಲ್ಲಾ ಬಂದರು, ಕಾಲುವೆ ಹಾಗೂ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರಷ್ಯಾ ಪ್ರವೇಶಿಸದಂತೆ ಮುಚ್ಚಬೇಕು ಎಂದು ಒತ್ತಾಯಿಸಿದ ಅವರು, ರಷ್ಯಾದ ಕ್ಷಿಪಣಿಗಳು, ವಿಮಾನಗಳು ಮತ್ತು ಹೆಲಿಕಾಪ್ಟರ್ಗಳು ಸಂಚರಿಸದಂತೆ ನಿರ್ಬಂಧ ಹೇರಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದರು.

ರಷ್ಯಾ ಕದನ ವಿರಾಮದ ನೆಪದಲ್ಲಿ ಮಾತುಕತೆ ನಡೆಸುತ್ತಿದ್ದಾಗ ಕೀವ್ನ್ನು ಅತಿಕ್ರಮಿಸಲು ಉಕ್ರೇನ್ ಮೇಲೆ ಬಾಂಬ್ ದಾಳಿ ಹಾಗೂ ಗುಂಡಿನ ದಾಳಿ ಮಾಡಿದೆ ಎಂದು ಆರೋಪಿಸಿದ ಅವರು, ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಝೆಲೆನ್ಸ್ಕಿ ರಷ್ಯಾ ನಾಯಕರಿಗೆ ವೀಡಿಯೋ ಸಂದೇಶದಲ್ಲಿ ಹೇಳಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ