ಅಮೆರಿಕಾದಲ್ಲಿ ಇಂದಿನಿಂದ ಮತ್ತೆ ಡೊನಾಲ್ಡ್ ಟ್ರಂಪ್ ಯುಗಾರಂಭ: ಭಾರತದಿಂದ ವಿಶೇಷ ಆಹ್ವಾನಿತರು ಯಾರು ನೋಡಿ
ಅಮೆರಿಕಾದಲ್ಲಿ ವಿಪರೀತ ಚಳಿಯಿರುವುದರಿಂದ ಈ ಬಾರಿ ಸಂಸತ್ತಿನ ಒಳಗೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಶ್ವದ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಇದರಲ್ಲಿ ಭಾರತದ ಉದ್ಯಮಿ ಮುಕೇಶ್ ಅಂಬಾನಿ ದಂಪತಿಯೂ ಸೇರಿದ್ದಾರೆ. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡಾ ಭಾಗಿಯಾಗಲಿದ್ದಾರೆ.
ಡೊನಾಲ್ಡ್ ಟ್ರಂಪ್ ಇದು ಎರಡನೇ ಬಾರಿಗೆ ಅಮೆರಿಕಾ ಅಧ್ಯಕ್ಷರಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಅಮೆರಿಕಾ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ಗೆಲುವು ಸಾಧಿಸಿದ್ದರು.