ಚೀನಾ ಆಮದು ಸರಕುಗಳ ಮೇಲೆ ಅಧಿಕ ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್
ಶನಿವಾರ, 16 ಜೂನ್ 2018 (09:00 IST)
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಅಧಿಕ ಸುಂಕ ವಿಧಿಸಿರುವ ಹಿನ್ನಲೆಯಲ್ಲಿ ಇದೀಗ ಈ ಎರಡು ಬೃಹತ್ ಆರ್ಥಿಕತೆ ರಾಷ್ಟ್ರಗಳ ನಡುವೆ ವ್ಯಾಪಾರ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಕಂಡುಬಂದಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚೀನಾ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 50 ಶತಕೋಟಿ ಡಾಲರ್ ಮೊತ್ತದ ಸುಂಕ ವಿಧಿಸಲು ಸಮ್ಮತಿ ನೀಡಿದ್ದಾರೆ. ಈ ಮೂಲಕ ಕಾರು, ವಿಮಾನಗಳು, ಸೋಯಾಬೀನ್ ಸೇರಿದಂತೆ ಅಮೆರಿಕದ ಉತ್ಪನ್ನಗಳ ಮೇಲೆ ಭಾರೀ ಮೊತ್ತದ ಕರಭಾರ ವಿಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ