ನನ್ನನ್ನು ಕಳ್ಳ ಎಂದು ಕರೆಯಬೇಡಿ, ನಾನು ನಿರಪರಾಧಿ: ಮಲ್ಯ

ಮಂಗಳವಾರ, 13 ಜೂನ್ 2017 (17:39 IST)
ನನ್ನನ್ನು ಕಳ್ಳ ಎಂದು ಕರೆಯಬೇಡಿ, ನಾನು ನಿರಪರಾಧಿ ಎಂದು ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ವಂಚಿಸಿದ ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
 
ಲಂಡನ್‌ನ ವೆಸ್ಟ್ ಮಿನಿಸ್ಟರ್ ಕೋರ್ಟ್‌ಗೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಯ, ನಾನು ಕಾನೂನನ್ನು ಗೌರವಿಸುತ್ತಿದ್ದರೂ ಮಾಧ್ಯಮಗಳು ನನ್ನನ್ನು ಕಳ್ಳನೆಂದು ಬಿಂಬಿಸುತ್ತಿವೆ. ದಯವಿಟ್ಟು ನನ್ನನ್ನು ಕಳ್ಳ ಎಂದು ಕರೆಯಬೇಡಿ ಎಂದು ಮನವಿ ಮಾಡಿದರು.
 
ದೇಶದ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂಪಾಯಿ ವಂಚಿಸಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಮಲ್ಯ, ನಾನು ನಿರಪರಾಧಿ ಎಂದು ಸಾಬೀತುಪಡಿಸಲು ನನ್ನ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಉಲ್ಟಾ ಹೊಡೆದಿದ್ದಾರೆ.
 
ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಮಾಧ್ಯಮಗಳು ಪೂರ್ವಾಗ್ರಹ ಪೀಡಿತವಾಗಿ ಅನಗತ್ಯವಾಗಿ ಚಿಕ್ಕ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುತ್ತಿವೆ ಎಂದು ಉದ್ಯಮಿ ವಿಜಯ್ ಮಲ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ