ಮುಳುಗಿದ ವಲಸಿಗರ ದೋಣಿ ! 34 ಮಂದಿ ಸಾವು

ಶುಕ್ರವಾರ, 17 ಮಾರ್ಚ್ 2023 (09:42 IST)
ಮಡಗಾಸ್ಕರ್ : ವಲಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಹಿಂದೂ ಮಹಾಸಾಗರದಲ್ಲಿ ಮುಳುಗಿ 34 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಈ ದೋಣಿ ಮಯೊಟ್ಟೆ ದ್ವೀಪದ ಕಡೆಗೆ ಸಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿಯಲ್ಲಿ ಒಟ್ಟು 58 ಮಂದಿ ವಲಸಿಗರು ಪ್ರಯಾಣಿಸುತ್ತಿದ್ದರು. ದೋಣಿ ರಹಸ್ಯವಾಗಿ ತೆರಳುತ್ತಿತ್ತು. ಮಡಗಾಸ್ಕರ್ನ ವಾಯುವ್ಯ ಕರಾವಳಿಯಲ್ಲಿ ಶನಿವಾರ ರಾತ್ರಿ ದೋಣಿ ಮುಳುಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವಘಡಕ್ಕೆ ಸಿಲುಕಿ ಮುಳುಗುತ್ತಿದ್ದ 24 ಮಂದಿಯನ್ನು ರಕ್ಷಿಸಲಾಗಿದೆ. ಮೂವರು ಮಕ್ಕಳು ಸೇರಿ 34 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ