ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ !?

ಸೋಮವಾರ, 26 ಸೆಪ್ಟಂಬರ್ 2022 (07:41 IST)
ಅಹಮದಾಬಾದ್ : ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಂತಿಮ ವರ್ಷಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುತ್ತಿತ್ತು.

ಇದರಿಂದಾಗಿ ಭಾರತದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಎಂದು ಇನ್ಫೋಸಿಸ್ನ ಸಂಸ್ಥಾಪಕ ಅಧ್ಯಕ್ಷ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕ್ಯಾಂಪಸ್ನಲ್ಲಿ ಯುವ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಲಂಡನ್ನ ಎಚ್ಎಸ್ಬಿಸಿ ಬ್ಯಾಂಕ್ನಲ್ಲಿ ನಡೆದ ಅನುಭವವನ್ನು ಹಂಚಿಕೊಂಡಿದ್ದಾರೆ.

ಮನಮೋಹನ್ ಸಿಂಗ್ ಒಬ್ಬ ಅಸಾಧಾರಣ ವ್ಯಕ್ತಿ, ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಅವರ ಅವಧಿಯಲ್ಲಿ ನಿರ್ಧಾರಗಳನ್ನು ವೇಗವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಎಲ್ಲವೂ ವಿಳಂಬ ಆಗುತ್ತಿತ್ತು. ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಎಂದು ಬೇಸರ ವ್ಯಕ್ತಪಡಿಸಿದರು.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ