ಲಂಡನ್ : ಕಿಂಗ್ ಚಾರ್ಲ್ಸ್ ಮತ್ತು ಕ್ಯಾಮಿಲ್ಲಾ ಅವರ ಮೇಲೆ ಮೊಟ್ಟೆಗಳನ್ನು ಎಸೆದಿದ್ದ ವಿದ್ಯಾರ್ಥಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.
ನವೆಂಬರ್ನಲ್ಲಿ ಉತ್ತರ ಇಂಗ್ಲೆಂಡ್ನಲ್ಲಿ ರಾಜ ಮತ್ತು ರಾಣಿ ಇಬ್ಬರು ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಈ ಯಾರ್ಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ಯಾಟ್ರಿಕ್ ಥೆಲ್ವೆಲ್ (23) ಎಂಬಾತ ಬ್ರಿಟಿಷ್ ರಾಜ ರಾಣಿಯ ಮೇಲೆ ಮೊಟ್ಟೆಗಳನ್ನು ಎಸೆದಿದ್ದ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಮೇಲೆ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪ ಹೊರಿಸಿ ಪ್ಯಾಟ್ರಿಕ್ನನ್ನು ಬಂಧಿಸಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಯಾರ್ಕ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸಿತ್ತು. ಕಿಂಗ್ ಚಾರ್ಲ್ಸ್ನ ಮೇಲೆ ಮೊಟ್ಟೆಗಳನ್ನು ಎಸೆದ ನಂತರ ಅಪರಾಧವು ಸಾಬೀತಾದ ಹಿನ್ನೆಲೆಯಲ್ಲಿ ಯುಕೆ ವಿದ್ಯಾರ್ಥಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.