ಪಾಕಿಸ್ತಾನದ ಹಲವೆಡೆ ಸ್ಫೋಟ! 5 ಸಾವು, 10 ಮಂದಿಗೆ ಗಾಯ

ಸೋಮವಾರ, 26 ಡಿಸೆಂಬರ್ 2022 (11:27 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಹಲವೆಡೆ ಸ್ಫೋಟ ನಡೆಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ರಸ್ತೆಯ ಮೇಲೆ ಎಸೆಯಲಾಗಿದೆ. ಅದರಲ್ಲಿ ಒಂದು ಸ್ಫೋಟಗೊಂಡಿದೆ. ಮತ್ತೊಂದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದು ಕ್ವೆಟ್ಟಾ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಅಬ್ದುಲ್ ಖುಡೂಸ್ ಬಿಜೆಂಜೊ ಅವರು ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ