ಪಾಕಿಸ್ತಾನದ ರಕ್ಷಣಾ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ಗುಂಡಿನ ದಾಳಿ

ಸೋಮವಾರ, 7 ಮೇ 2018 (13:46 IST)
ಇಸ್ಲಾಮಾಬಾದ್ : ಪಾಕಿಸ್ತಾನ ಮುಸ್ಲಿಂ ಲೀಂಗ್ ಪಕ್ಷದ ಮುಖಂಡ ಹಾಗೂ ರಕ್ಷಣಾ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ನರೋವಾಲ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪಂಜಾಬ್ ಪ್ರಾಂತದ ತಮ್ಮ ತವರು ಜಿಲ್ಲೆಯಲ್ಲಿ ರಾಜಕೀಯ ರ್ಯಾಲಿಯಲ್ಲಿ ಸಚಿವರು ಪಾಲ್ಗೊಂಡಿದ್ದ ವೇಳೆ ಈ ಘಟನೆ ನಡೆದಿದೆ. ಇಕ್ಬಾಲ್ ಅವರ ಬಲತೋಳಿಗೆ ಗುಂಡು ತಗುಲಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  30 ಬೋರ್ ಪಿಸ್ತೂಲ್‌ನಿಂದ ಈ ದಾಳಿ ನಡೆದಿದ್ದು, 18 ಮೀಟರ್ ಅಂತರದಿಂದ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಇಮ್ರಾನ್ ಕಿಸ್ವರ್ ಹೇಳಿದ್ದಾರೆ. ಹಾಗೇ ಶಂಕಿತ ವ್ಯಕ್ತಿಯೊರ್ವನನ್ನು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


ಘಟನೆ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪಂಜಾಬ್ ಮುಖ್ಯಮಂತ್ರಿ ಶಹಬಾರ್ ಶರೀಫ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ