ಕತಾರ್‌ನಿಂದ ಮೈತ್ರಿ ಕಡಿದುಕೊಂಡ ಐದು ಅರಬ್ ರಾಷ್ಟ್ರಗಳು

ಮಂಗಳವಾರ, 6 ಜೂನ್ 2017 (20:12 IST)
ಕತಾರ್ ದೇಶ ಪ್ರತ್ಯೇಕತಾವಾದಕ್ಕೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಸೌದಿ ಅರೇಬಿಯಾ ಮತ್ತು ಈಜಿಪ್ತ್ ಸೇರಿದಂತೆ ಐದು ಅರಬ್ ರಾಷ್ಟ್ರಗಳು ತಮ್ಮ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿವೆ 
 
ಪ್ರದೇಶವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಇರಾನ್ ಬೆಂಬಲಿತ ಪ್ರತ್ಯೇಕತಾವಾದಿ ಗುಂಪುಗಳಿಗೆ ಕತಾರ್ ದೇಶ ಬೆಂಬಲ ನೀಡುತ್ತಿದೆ ಎನ್ನುವ ಆಘಾತಕಾರಿ ಸಂಗತಿ ಬಹಿರಂಗವಾದ ಹಿನ್ನೆಲೆಯಲ್ಲಿ ಬಹರೈನ್, ಯುಎಇ, ಯೆಮೆನ್, ಮಾಲ್ದೀವ್ಸ್, ಸೌದಿ ಅರೇಬಿಯಾ ಮತ್ತು ಈಜಿಪ್ತ್ ದೇಶಗಳು ತಮ್ಮ ಸಂಬಂಧವನ್ನು ಕಡಿದುಕೊಂಡಿವೆ.  
 
ಕತಾರ್‌ನೊಂದಿಗೆ ರಾಜತಾಂತ್ರಿಕ ಮತ್ತು ಸಾರಿಗೆ ಸಂಪರ್ಕವನ್ನು ಕಡಿತಗೊಳಿಸಿರುವ ಸೌದಿ ಅರೇಬಿಯಾ, ಈಜಿಪ್ತ್ ದೇಶಗಳು ತೈಲ ಅಮುದಿಗೆ ನೆರೆಯ ರಾಷ್ಟ್ರಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ. 
 
ಐದು ಗಲ್ಫ್ ರಾಷ್ಟ್ರಗಳು ತಮ್ಮ ನಾಗರಿಕರನ್ನು ಕತಾರ್‌ಗೆ ಪ್ರಯಾಣಿಸುವುದನ್ನು ನಿಷೇಧಿಸಿದ್ದಲ್ಲದೇ, ಕತಾರ್‌ ನಾಗರಿಕರು 14 ದಿನಗಳಲ್ಲಿ ದೇಶವನ್ನು ತೊರೆಯುವಂತೆ ಆದೇಶ ನೀಡಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ